ವಿಜಯಪುರ: ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯಂಕಂಚಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. 30 ವರ್ಷದ ಯಲ್ಲಾಲಿಂಗ ಹಣಮಂತ ತಳವಾರ ಆತ್ಮಹತ್ಯೆಗೆ ಶರಣಾಗಿರುವ ರೈತ. ಇನ್ನು ಕೆವಿಜಿ ಬ್ಯಾಂಕ್, ಪಿಕೆಪಿಎಸ್ನಲ್ಲಿ 6 ಲಕ್ಷ ಸೇರಿದಂತೆ ಕೈಗಡ ಸಾಲ ಮಾಡಿಕೊಂಡಿದ್ದರು. ಹೊಲದಲ್ಲಿ ಪಿಕ್ ಬರದೇ ಮನನೊಂದು ಕೊಂಡಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿಂದಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.