ವಿಜಯಪುರ, ಜ. 11: ಬಬಲೇಶ್ವರ ಮತ್ತು ತಿಕೋಟಾ ತಾಲೂಕುಗಳ ಕಂದಾಯ ದಾಖಲೆಗಳ ಗಣಕೀಕರಣ ಕೇಂದ್ರವನ್ನು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಉದ್ಘಾಟಿಸಿದರು.
ವಿಜಯಪುರ ನಗರದ ಹಳೆಯ ತಹಸೀಲ್ದಾರ್ ಕಚೇರಿಯಲ್ಲಿ
ನೂತನವಾಗಿ ಪ್ರಾರಂಭಿಸಲಾಗಿರುವ ಈ ಕೇಂದ್ರವನ್ನು ಸಚಿವರು ಇಂದು ಶನಿವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕೆ.ಎಸ್.ಡಿ.ಎಲ್ ಅಧ್ಯಕ್ಷ ಮತ್ತು ಶಾಸಕ ಸಿ. ಎಸ್. ನಾಡಗೌಡ, ಶಾಸಕ ವಿಠ್ಠಲ ಧೋ. ಕಟಕದೊಂಡ, ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿ. ಪಂ. ಸಿಇಓ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಸೋಮನಿಂಗ ಗೆಣ್ಣೂರ, ಬಬಲೇಶ್ವರ ತಹಸೀಲ್ದಾರ ಸಂತೋಷ ಮ್ಯಾಗೇರಿ, ತಿಕೋಟಾ ತಹಸೀಲ್ದಾರ ಸುರೇಶ ಚವಲರ ಮುಂತಾದವರು ಉಪಸ್ಥಿತರಿದ್ದರು.
ಭೂ ಸುರಕ್ಷಾ ಯೋಜನೆಯಡಿ ಹಳೆಯ ದಾಖಲೆಗಳನ್ನು ಡಿಜಟಲೀಕರಣ ಮಾಡಲಾಗುತ್ತಿದೆ. ಈ ಕೇಂದ್ರದಲ್ಲಿ ಬಬಲೇಶ್ವರ ಮತ್ತು ತಿಕೋಟಾ ಎರಡೂ ತಾಲೂಕುಗಳ ಹಳೆಯ ಎಲ್ಲ ಭೂ ದಾಖಲೆಗಳ ಗಣಕೀಕರಣ ನಡೆಯಲಿದ್ದು, ಇದರಿಂದ ದಾಖಲೆಗಳ ಸುರಕ್ಷತೆ ಮತ್ತು ಸುಲಭವಾಗಿ ಲಭ್ಯತೆ ಸಾಧ್ಯವಾಗಲಿದೆ.
Bhoo Suraksha Centre Inauguration: ಬಬಲೇಶ್ವರ ಮತ್ತು ತಿಕೋಟಾ ತಾಲೂಕುಗಳ ಕಂದಾಯ ದಾಖಲೆಗಳ ಗಣಕೀಕರಣ ಕೇಂದ್ರವನ್ನು ವಿಜಯಪುರ ನಗರದ ಹಳೆಯ ತಹಸೀಲ್ದಾರ ಕಚೇರಿ ಆವರಣದಲ್ಲಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೆ.ಎಸ್.ಡಿ.ಎಲ್ ಅಧ್ಯಕ್ಷ ಮತ್ತು ಶಾಸಕ ಸಿ. ಎಸ್. ನಾಡಗೌಡ, ಶಾಸಕ ವಿಠ್ಠಲ ಧೋ. ಕಟಕದೊಂಡ, ಟಿ. ಭೂಬಾಲನ್, ರಿಷಿ ಆನಂದ ಮುಂತಾದವರು ಉಪಸ್ಥಿತರಿದ್ದರು.