ಧಾರವಾಡ: ರಸ್ತೆ ಪಕ್ಕದಲ್ಲಿ ಮಲಗಿದ ವೃದ್ಧೆ ಭಿಕ್ಷುಕಿ ಮೇಲೆ ಬೀದಿ ನಾಯಿಗಳು ದಾಳಿಗೈದು ಪರಿಣಾಮ ವೃದ್ಧೆ ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ಧಾರವಾಡ ತಾಲ್ಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಖಬರಸ್ತಾನ್ ಬಳಿ ಘಟನೆ ನಡೆದಿದೆ. ಮಲಗಿದ್ದ ಭಿಕ್ಷುಕಿಯನ್ನು ಬೀದಿ ನಾಯಿಗಳು ಕಚ್ಚಿ ಎಳೆದಾಡಿದೆ. ಪರಿಣಾಮ ಭಿಕ್ಷುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಇನ್ನೂ ಮೃತಪಟ್ಟಿರುವ ವೃದ್ಧೆಯ ಹೆಸರು ಹಾಗೂ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಗರಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.