ವಿಜಯಪುರ: ಆಕಸ್ಮಿಕ ಶಾರ್ಟ್ ಸರ್ಕ್ಯೂಟ್ನಿಂದ ಮನೆ ಬೆಂಕಿಗಾಹುತಿ ಆಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಬಲೇಶ್ವರ ಗ್ರಾಮದಲ್ಲಿ ನಡೆದಿದೆ. ಶಂಕ್ರಮ್ಮ ಸುರಗಹಳ್ಳಿ ಸೇರಿದ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಇನ್ನೂ ಮನೆಯಲ್ಲಿರುವ 1 ಲಕ್ಷ ನಗದು ಹಣ ಹಾಗೂ ಬಂಗಾರದ ಆಭರಣ ಸೇರಿದಂತೆ ಕೋಳಿ, ಕುರಿ ಸುಟ್ಟು ಭಸ್ಮವಾಗಿವೆ. ಅಲ್ಲದೇ, ವಿವಿಧ ಬೆಲೆಬಾಳುವ ವಸ್ತುಗಳು ಸುಟ್ಟು ಮಣ್ಣು ಪಾಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ತಂಡ ಭೇಟಿ ನೀಡಿ ಬೆಂಕಿ ನಂದಿಸಿದರು. ಆಲಮೇಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.