ವಿಜಯಪುರ ::ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರೈತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಹೇಳಿದರು. ವಿಜಯಪುರ ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೆ ದೊಡ್ಡ ಪ್ರಮಾಣದಲ್ಲಿ ಅನ್ಯಾಯ ಆಗುತ್ತಿದೆ. ಅದಕ್ಕಾಗಿ ಜನವರಿ 20ರಂದು ಸಚಿವ ಶಿವಾನಂದ ಪಾಟೀಲ ಹಾಗೂ ವಿಜಯಪುರ ಎಪಿಎಂಸಿ ಮಾರುಕಟ್ಟೆಯಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಯಲಿದೆ. ಈ ಧರಣಿ ಸತ್ಯಾಗ್ರಹ ರಾಜ್ಯಾಧ್ಯಕ್ಷ ಚೂನಪ್ಪ ಪೂಜೇರಿ ನೇತೃತ್ವದಲ್ಲಿ ಧರಣಿ ನಡೆಯಲಿದ್ದು, ಪ್ರತಿ ಟನ್ ಕಬ್ಬಿಗೆ ಕಟಾವು, ಸಾಗಾಣೆ ಹೊರತು ಪಡಿಸಿ 4 ಸಾವಿರ ದರ ನೀಡಬೇಕು. ಎಪಿಎಂಸಿ ಮಾರುಕಟ್ಟೆಯಲ್ಲಿ 87 ಬಿ ಕಾಯ್ದೆ ರದ್ದುಗೊಳಿಸಬೇಕು. ದಲ್ಲಾಳಿಗಳ ಹಾವಳಿ ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರ ತಕ್ಷಣವೇ ಪೂರೈಸಬೇಕು ಎಂದು ಒತ್ತಾಯಿಸಿದರು.