ವಿಜಯಪುರ: ಕಸದ ತೊಟ್ಟಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ವಿಜಯಪುರ ನಗರದ ಬಸ್ ನಿಲ್ದಾಣದ ಎದುರು ನಡೆದಿದೆ. ಇನ್ನು ಕಸದ ತೊಟ್ಟಿಯಲ್ಲಿ ಬಿದ್ದಿರುವ ಪ್ಲಾಸ್ಟಿಕ್ ಸೇರಿದಂತೆ ವಿವಿಧ ವಸ್ತುಗಳು ಭಸ್ಮವಾಗಿವೆ. ಅಲ್ಲದೇ, ಬೆಂಕಿ ಹೊತ್ತಿ ಉರಿದಿರುವ ಪರಿಣಾಮ ಅಕ್ಕಪಕ್ಕದ ಅಂಗಡಿಗಳಿಗೆ ಯಾವುದೇ ಹಾನಿಯಾಗಿಲ್ಲ. ಸ್ಥಳೀಯರೇ ಬೆಂಕಿ ನಂದಿಸುವ ಕಾರ್ಯ ಮಾಡಿದರು. ವಿಜಯಪುರ ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.