ವಿಜಯಪುರ: ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಮಲಘಾಣ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಪಡಗಾನೂರ ನಿವಾಸಿಯಾದ 40 ವರ್ಷದ ಶಿವು ಪೂಜಾರಿ ಆತ್ಮಹತ್ಯೆಗೆ ಶರಣಾದರು. ಅಲ್ಲದೇ, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊಲ್ಹಾರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.