ವಿಜಯಪುರ: ಬಸ್ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ರಾಜರಾಜೇಶ್ವರಿ ಕಲ್ಯಾಣ ಮಂಟಪದ ಹತ್ತಿರ ನಡೆದಿದೆ. 20 ವರ್ಷದ ಅಲ್ಲಾಭಕ್ಷ ನೂರಸಾಬ ಜಾತಗಾರ ಮೃತಪಟ್ಟಿರುವ ದುರ್ದೈವಿ. ಅಲ್ಲದೇ, ಘಟನೆಗೆ ಎರಡು ವಾಹನಗಳ ನಿರ್ಲಕ್ಷ್ಯ ಕಾರಣ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿಂದಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.