ವಿಜಯಪುರ: ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ. ಲಿಂಗಸ್ಗೂರು ತಾಲೂಕಿನ ಕೋಮಲಾಪೂರದ ಪದ್ಮಾವತಿ ಸಂಜಯ ಮೇಟಿ(17) ನೇಣಿಗೆ ಶರಣಾದರು. ಇನ್ನೂ ಡೆತ್ ನೋಟ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ತನ್ನ ಸಾವಿಗೆ ತಾನೇ ಕಾರಣವೆಂದು ಡೆತ್ ನೋಟ್ ನಲ್ಲಿ ಬರೆದಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಸೈನ್ಸ್ ವಿಷಯ ಇಷ್ಟವಾಗದೇ ಮನನೊಂದು ನೇಣಿಗೆ ಶರಣಾಗಿದ್ದಾಳೆ. ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.