ವಿಜಯಪುರ: ಜಿಲ್ಲೆಯಲ್ಲಿ ಕೋವಿಡ್ ವೈರಸ್ ಕೇಸ್ ಪತ್ತೆಯಾಗಿದೆ. ಇಂದು ಓರ್ವನಲ್ಲಿ ಕೊರೋನಾ ಪಾಸಿಟಿವ್ ದೃಢವಾಗಿದೆ ಎಂದು ಜಿಲ್ಲಾಡಳಿತ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ಲಭ್ಯವಾಗಿದೆ. ಅಲ್ಲದೇ, ವಿಜಯಪುರ ನಗರದಲ್ಲಿ ಓರ್ವನಲ್ಲಿ ಕೋವಿಡ್ ಪತ್ತೆಯಾಗಿದೆ. ಅದಕ್ಕಾಗಿ ಜಿಲ್ಲಾಡಳಿತ, ಸರ್ಕಾರದ ಕೋವಿಡ್ ನಿಯಮಗಳನ್ನು ಜನತೆ ಪಾಲನೆ ಮಾಡುವ ಮೂಲಕ ಕೋವಿಡ್ ಹರಡದಂತೆ ಜನರು ಜಾಗೃತರಾಗಬೇಕಿದೆ.