ವಿಜಯಪುರ: ಐತಿಹಾಸಿಕ ಗುಮ್ಮಟ ನಗರಿಯಲ್ಲಿ ವಿಶ್ವ ಪರಿಸರ ದಿನದ ಹಿನ್ನೆಲೆ ಸ್ಥಳದಲ್ಲಿಯೇ ಮಕ್ಕಳ ಚಿತ್ರಕಲಾ ಸ್ಪರ್ಧೆ ನಡೆಯಿತು.
ವಿಜಯವಾಣಿ ಹಾಗೂ ದಿಗ್ವಿಜಯ ವಾಹಿನಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗ ಮತ್ತು ವೃಕ್ಷ ಅಭಿಯಾನ ಟ್ರಸ್ಟ್ ಸಹಕಾರದಲ್ಲಿ ಶುಕ್ರವಾರ ನಡೆದ ಸ್ಪರ್ಧೆಯಲ್ಲಿ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಇಲ್ಲಿನ ಪ್ರವಾಸಿ ಮಂದಿರದ ಆರ್ಟ್ ಗ್ಯಾಲರಿಯಲ್ಲಿ ನಡೆದ ಸ್ಪರ್ಧೆಯಲ್ಲಿ ನಿರೀಕ್ಷೆಗೂ ಮೀರಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.