ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದರು. ವಿಜಯಪುರ ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮಲ್ಲು ಕರ್ವೆ ಹಾಗೂ ಮನಿಗೇನಿ ಕರ್ವೆ ಬಂಧಿತ ಆರೋಪಗಳು.
ಇನ್ನು ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಯತ್ನಾಳ ಗ್ರಾಮದಲ್ಲಿ ತಮ್ಮ ಜಮೀನಿನಲ್ಲಿ ಕಬ್ಬು ಹಾಗೂ ಮೆಕ್ಕೆಜೋಳ ಮಧ್ಯದಲ್ಲಿ ಸುಮಾರು 79 ಲಕ್ಷದ 80 ಸಾವಿರ ಮೌಲ್ಯದ ಗಾಂಜಾ ಬೆಳೆದಿದ್ದರು. ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿಗೈದು ಆರೋಪಗಳ ಸಮೇತ ಗಾಂಜಾ ಜಪ್ತಿಗೈದಿದ್ದಾರೆ. ಈ ಕುರಿತು ತಿಕೋಟಾ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದರು.