ವಿಜಯಪುರ: ಐತಿಹಾಸಿಕ ಗುಮ್ಮಟನಗರಿಯಲ್ಲಿ 74ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿತ್ತು. ವಿಜಯಪುರ ನಗರದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಗುರುವಾರ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಡಿಸಿ ದಾನಮ್ಮನವರಗೆ ಪೊಲೀಸರು ಗೌರವ ವಂದನ ಸಲ್ಲಿಸಿದರು. ತದನಂತರ ಪೊಲೀಸ್, ಎನ್ಸಿಸಿ ಹಾಗೂ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಈ ಸಂದರ್ಭದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಎಸ್ಪಿ ಆನಂದಕುಮಾರ ಸೇರಿದಂತೆ ಹಲವರು ಭಾಗಿಯಾಗಿದ್ದರು.