ವಿಜಯಪುರ: ಕಸ ವಿಲೇವಾರಿ, ಸ್ವಚ್ಛತಾ ಕಾರ್ಯವನ್ನು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಶುಕ್ರವಾರ ಪರಿಶೀಲನೆ ನಡೆಸಿದರು. ವಿಜಯಪುರ ನಗರದ ಪುರಾತತ್ವ ಇಲಾಖೆ ವ್ಯಾಪ್ತಿಯ ಸ್ಥಳಗಳಲ್ಲಿ ಕಸ ಹಾಕಿರುವುದು ಪತ್ತೆಯಾಗಿದ್ದು, ಪಾಲಿಕೆ ಸಿಬ್ಬಂದಿಗೆ ಕಸ ತೆಗೆಯಲು ಪುರಾತತ್ವ ಇಲಾಖೆಗೆ ಅವಕಾಶ ನೀಡಿಲ್ಲ. ಅದಕ್ಕಾಗಿ ಡಿಸಿ, ಪಾಲಿಕೆ, ಪುರಾತತ್ವ ಇಲಾಖೆ ಜೊತೆ ಚರ್ಚಿಸುವೆ ಎಂದರು. ಜಿಲ್ಲೆಯಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಕಸ ನಿರ್ವಹಣೆ ಕುರಿತು ಜನರು ಕೂಡ ಜಾಗೃತರಾಗಬೇಕು ಎಂದರು. ಈ ವೇಳೆ ಪಾಲಿಕೆ ಆಯುಕ್ತ ವಿಜಯಕುಮಾರ್ ಮೆಕ್ಕಳಕಿ, ವಿಜಯಪುರ ತಹಶೀಲ್ದಾರ ಸಿದ್ದರಾಯ ಭೋಸಗಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.