ಬೆಳಗಾವಿ: ಗುಟ್ಕಾ ತಂಬಾಕು ವಿಚಾರಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅನಿಗೋಳ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್ ಸುಣಗಾರ ಕೊಲೆಯಾದ ದುರ್ದೈವಿ. ಅಜಯ್ ಹಿರೇಮಠ ಹತ್ಯೆಗೈದು ಪರಾರಿಯಾಗಿದ್ದಾನೆ. ಕುಡಿದು ಪಾನ್ ಶಾಪ್ ಬಳಿ ನಿಂತಿದ್ದರು. ಗುಟ್ಕಾ ತಿಂದು ಉಗುಳಿದ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ಆಗಿದೆ. ಅದಕ್ಕಾಗಿ ಹತ್ಯೆಗೈದು ಎಸ್ಕೇಪ್ ಆಗಿದ್ದಾನೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.