ವಿಜಯಪುರ: ವಿಜಯಪುರ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳಿಗೆ ವೈದ್ಯಕೀಯ ಸೌಲಭ್ಯ ಒದಗಿಸುವ ಸಲುವಾಗಿ ಸಂದರ್ಶಕ ವೈದ್ಯರ ಹುದ್ದೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಫೆ.14 ರಂದು ಬೆಳಿಗ್ಗೆ 10 ಗಂಟೆಗೆ ವಿಜಯಪುರ ಕೃಷಿ ಮಹಾವಿದ್ಯಾಲಯದ ಡೀನ್ (ಕೃಷಿ) ಸಂದರ್ಶನ ಕೊಠಡಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.
ಎಂಬಿಬಿಎಸ್ ಜೊತೆಗೆ ಕಂಪಲ್ಸರಿ ಇಂಟರ್ನಶಿಪ್ ಪ್ರೊಗ್ರಾಮ & ಕೆಎಂಸಿಯಲ್ಲಿ ನೋಂದಣಿಯಾದ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು. ಈ ನೇಮಕಾತಿ ತಾತ್ಕಾಲಿಕವಾಗಿರುವುದರಿಂದ ಯಾವುದೇ ಸಮಯದಲ್ಲಿ ಕರ್ತವ್ಯದಿಂದ ತೆಗೆದುಹಾಕುವ ಅಧಿಕಾರ ಕೃಷಿ ವಿಶ್ವವಿದ್ಯಾಲಯಕ್ಕಿರುತ್ತದೆ ಎಂದು ಡೀನ್(ಕೃಷಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.