ಹುಬ್ಬಳ್ಳಿ: ನೂರಕ್ಕೂ ಹೆಚ್ಚು ಒಳಪಂಗಡಗಳು ಇರೋ ಲಿಂಗಾಯತ ಸಮಾಜಕ್ಕೆ ಸಾಂವಿಧಾನಿಕ ಮಾನ್ಯತೆ ಸಿಗಬೇಕು. ಲಿಂಗಾಯತ ಧರ್ಮದ ಮಾನ್ಯತೆಗಾಗಿ ಶತಮಾನಗಳಿಂದ ಹೋರಾಟ ನಡೆದಿದೆ. ಪ್ರತ್ಯೇಕ ಲಿಂಗಾಯತ ಧರ್ಮ ಮಾಡಬೇಕೆಂದು ಅಖಿಲ ಭಾರತ ಲಿಂಗಾಯತ ಸಮನ್ವಯ ಸಮಿತಿ ಅಧ್ಯಕ್ಷ, ಜಗದ್ಗುರು ಡಾ.ಚನ್ನಬಸವಾನಂದ ಸ್ವಾಮೀಜಿ ಒತ್ತಾಯ ಮಾಡಿದರು.
ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ ಅವರು ನ್ಯಾಯಮೂರ್ತಿ ನಾಗಮೋಹನದಾಸ ತಜ್ಞರ ವರದಿ ಕೇಂದ್ರ ಸರ್ಕಾರಕ್ಕೆ ಮರು ಶಿಫಾರಸ್ಸು ಮಾಡಬೇಕು. ಪ್ರತ್ಯೇಕ ಧರ್ಮಕ್ಕಾಗಿ 2017ರಿಂದ ಡಾ.ಮಾತೆಮಹಾದೇವಿ ನೇತೃತ್ವದಲ್ಲಿ ಹೋರಾಟ ಮಾಡ್ತಾ ಬಂದಿದ್ದಾರೆ. ಈಗ ಮಾತೆ ಮಹಾದೇವಿ ಲಿಂಗೈಕ್ಯರಾದ ಮೇಲೂ ಹೋರಾಟ ಮುಂದುವರೆದಿದೆ. ಮಾಜಿ ಸಿಎಂ ಸಿದ್ದರಾಮಯ್ಯನವರ ಸರ್ಕಾರದಲ್ಲಿ ನ್ಯಾಯಮೂರ್ತಿ ನಾಗಮೋಹನ ದಾಸ ತಜ್ಞರ ಸಮಿತಿ ರಚಿಸಿ ವರದಿ ನೀಡಿದ ಬಳಿಕ ಕರ್ನಾಟಕ ಸರ್ಕಾರದಿಂದ ಕೇಂದ್ರಕ್ಕೆ ಶಿಫಾರಸು ಮಾಡಲಾಗಿತ್ತು. ಆದ್ರೆ ಕೇಂದ್ರ ಸರ್ಕಾರ ಕರ್ನಾಟಕ ಸರ್ಕಾರ ಮಾಡಿದ್ದ ಶಿಫಾರಸ್ಸನ್ನ ಒಪ್ಪಲಿಲ್ಲ. ಹೀಗಾಗಿ ಇದೇ ಫೆಬ್ರವರಿ 20ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಒಂದು ದಿನ ಸಾಂಕೇತಿಕ ಪ್ರತಿಭಟನೆ ಮಾಡಲಾಗುತ್ತದೆಂದು ನಿರ್ಧಾರ ಮಾಡಿದ್ದಾರೆ.
ಆ ಪ್ರತಿಭಟನೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಶಿಫಾರಸ್ಸು ಮಾಡಿದ್ದನ್ನ ಮತ್ತೊಮ್ಮೆ ಬೊಮ್ಮಾಯಿ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕು. ಕೇಂದ್ರ ಸರ್ಕಾರಕ್ಕೆ ನ್ಯಾಯಮೂರ್ತಿ ನಾಗಮೋಹನ ದಾಸ ವರದಿ ಶಿಫಾರಸ್ಸು ಮಾಡಬೇಕು. ಇನ್ನು 48 ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟನೆ ಆಯೋಜನೆ ಮಾಡಿದೆ. ಕರ್ನಾಟಕ, ತಮಿಳುನಾಡು, ಮಹಾರಾಷ್ಟ್ರ, ಆಂಧ್ರಪ್ರದೇಶ ಸೇರಿದಂತೆ ಇತರ ರಾಜ್ಯದ ಲಿಂಗಾಯತರು ಆಗಮಿಸುತ್ತಿದ್ದಾರೆ. ಅಂದು ನಾಗಮೋಹನ ದಾಸ ವರದಿ ಸೇರಿ ವಿವಿಧ ಬೇಡಿಕೆಗೆ ಆಗ್ರಹಿಸಿ ಮುಖ್ಯಮಂತ್ರಿಗೆ ಮನವಿ ಸಲ್ಲಿಕೆ ಮಾಡಲಾಗುವುದು ಎಂದರು.
ಇನ್ನು ಕಲಬುರಗಿ ವಿವಿಗೆ ಬಸವೇಶ್ವರ ಹೆಸರು ನಾಮಕರಣ ಮಾಡಬೇಕು. ನಾವು ಈ ಬಗ್ಗೆ ಹೋರಾಟ ಮಾಡಿದ್ದೇವೆ. ಕೂಡಲಸಂಗಮ ಪೀಠಕ್ಕೆ ಭಕ್ತರಿಗೆ ವಿಧಿಸುವ ಶುಲ್ಕ ನಿಲ್ಲಿಸಬೇಕು. ಭಕ್ತರಿಗೆ ಶುಲ್ಕ ಪಡೆಯದೇ ಅವಕಾಶ ನೀಡಬೇಕು. ಬಸವಣ್ಣನವರನ್ನ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಬೇಕು. ಸರ್ಕಾರ ಈ ಬೇಡಿಕೆ ಈಡೇರಿಸಬೇಕು. ಇದೇ ಅಧಿವೇಶನದಲ್ಲಿ ಸಿಎಂ ಬೊಮ್ಮಾಯಿ ನಿರ್ಣಯ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.