ಮಂಗಳೂರು: ರಾಜ್ಯದಲ್ಲಿ ಮತ್ತೆ ಕಮಲ ಅರಳಿದ್ರೇ ಮತ್ತೆ ಬಸವರಾಜ್ ಬೊಮ್ಮಾಯಿ ಸಿಎಂ ಆಗ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ ಶಾ ಘೋಷಣೆ ಮಾಡಿದರು. ಪುತ್ತೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದ ಜನತೆಗೆ ಬಿಜೆಪಿ ಹೈಕಮಾಂಡ್ ಕ್ಲಿಯರ್ ಮೆಸೇಜ್ ನೀಡಿದ್ದು, ಬಿಜೆಪಿ ಸರ್ಕಾರವನ್ನು ಮತ್ತೆ ಅಧಿಕಾರಕ್ಕೆ ತನ್ನಿ, ಬಸವರಾಜ್ ಬೊಮ್ಮಾಯಿ ಅವರ ಕೈ ಬಲಪಡಿಸಿ ಎಂದು ಹೇಳುವ ಮೂಲಕ ಲಿಂಗಾಯತ ಸಮುದಾಯಕ್ಕೆ ಶಾ ಮೆಸೇಜ್ ಕೊಟ್ಟಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದ್ರೆ ಬೊಮ್ಮಾಯಿಯೇ ಸಿಎಂ ಆಗುತ್ತಾರೆ ಎಂದು ಅಮಿತ್ ಶಾ ಸಂದೇಶ ರವಾನಿಸಿದ್ದಾರೆ.