ವಿಜಯಪುರ: ಕಾಂಗ್ರೆಸ್ ಜೆಡಿಎಸ್ ಒಂದೇ ನಾಣ್ಯದ ಎರಡು ಮುಖ- ಅಮಿತ್ ಷಾ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸಂವಿಧಾನ ಮೇಲೆ ನಂಬಿಕೆ ಇಟ್ಟುಕೊಂಡಿರೋ ಪಕ್ಷವಾಗಿದೆ. ಬಿಜೆಪಿ ಸಂವಿಧಾನಕ್ಕೆ ಗೌರವ, ನಂಬಿಕೆ ಇಲ್ಲದ ವಿರೋಧಿ ಪಕ್ಷವಾಗಿದೆ. ಇನ್ನೂ ಜೆಡಿಎಸ್ ಜಾತ್ಯಾತೀತ ಪಕ್ಷ, ಹೇಗೆ ಒಂದಾಗೋದಕ್ಕೆ ಸಾಧ್ಯವೆಂದು ವ್ಯಂಗ್ಯವಾಡಿದರು.