ಮಂಡ್ಯ: ಬೆಂಕಿ ನಂದಿಸಲು ಹೋಗಿ ರೈತ ಸಜೀವ ದಹನವಾಗಿರುವ ಘಟನೆ ಮಂಡ್ಯ ತಾಲೂಕಿನ ಮೊಡಚಾಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಬ್ಬಿಗೆ ಬಿದ್ದ ಬೆಂಕಿ ನಂದಿಸಲು ಹೋಗಿ ರೈತ
ಮಹಾಲಿಂಗಯ್ಯ(60) ಸಜೀವ ದಹನ ವಾದ ರೈತ. ಅಲ್ಲದೇ, ಘಟನೆಯಲ್ಲಿ ರೈತನ 5 ಎಕರೆ ಕಬ್ಬು ಬೆಳೆ ಸಂಪೂರ್ಣ ಭಸ್ಮವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.