ವಿಜಯಪುರ: ನಾಗಠಾಣ ಮತಕ್ಷೇತ್ರ ಅಭಿವೃದ್ಧಿ ಆಗಿಲ್ಲ. ಅದಕ್ಕಾಗಿ ಪಕ್ಷೇತರ ಅಭ್ಯರ್ಥಿ ಆಗಿ ಕಣಕ್ಕೆ ಇಳಿಯುತ್ತಿದ್ದೇನೆ ಎಂದು ಧರೆಪ್ಪಾ ಅರ್ಧಾವೂರ ಹೇಳಿದರು. ವಿಜಯಪುರ ನಗರದಲ್ಲಿ ಮಂಗಳವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಗಠಾಣ ಮತಕ್ಷೇತ್ರ ಅವೈಜ್ಞಾನಿಕ ಮತಕ್ಷೇತ್ರ ಆಗಿದೆ. ಅದಕ್ಕಾಗಿ ಪ್ರಾಮಾಣಿಕವಾಗಿ ನಾಗಠಾಣ ಮತಕ್ಷೇತ್ರ ಅಭಿವೃದ್ಧಿ ಮಾಡುತ್ತೇನೆ. 85 ಹಳ್ಳಿಗಳ ಪ್ರತಿ ಮನೆಗಳಿಗೆ ಭೇಟಿ ನೀಡುತ್ತೇನೆ ಎಂದರು.
ಅಲ್ಲದೇ, ನಾಳೆಯಿಂದ ನಾಗಠಾಣ ಮತಕ್ಷೇತ್ರ ಅಭಿವೃದ್ಧಿಗಾಗಿ ಸಂಕಲ್ಪ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಸಂಕಲ್ಪ ಪಾದಯಾತ್ರೆಯಲ್ಲಿ ಮನೆ ಮನೆಗಳಿಗೆ ಹೋಗಿ ಅಭಿವೃದ್ಧಿಗಾಗಿ ಮತ ಕೇಳುತ್ತೇನೆ ಎಂದರು. ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ, ಗುಡಿಸಲು ಮುಕ್ತ ಕ್ಷೇತ್ರ, ಹಿರಿಯ ನಾಗರಿಕರಿಗೆ ಪಿಂಚಣಿ ವ್ಯವಸ್ಥೆ, ಕನ್ನಡ ಶಾಲೆ ಹಾಗೂ ಸರ್ಕಾರಿ ಆಸ್ಪತ್ರೆ ಸುಧಾರಣೆ, ರೈತರ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ಸೇರಿದಂತೆ 14 ನನ್ನ ಮುಖ್ಯ ಗುರಿಗಳನ್ನು ಇಟ್ಟುಕೊಂಡು ಮತ ಬೇಟೆ ಮಾಡುತ್ತೇನೆ ಎಂದರು.