ಬೆಳಗಾವಿ: ಜಿಲ್ಲೆಯ ಖಾನಾಪೂರ ತಹಶೀಲ್ದಾರ ಕಚೇರಿಯ ಅಧಿಕಾರಿಗಳ ವಿರುದ್ಧ ದಲಿತ ಸಂಘಟನೆ ಹಾಗೂ ರೈತ ಸಂಘದ ಮುಖಂಡರು ಪ್ರತಿಭಟನೆ ನಡೆಸಿದರು. ತಹಶೀಲ್ದಾರ ಕಚೇರಿಯಲ್ಲಿನ ಅಧಿಕಾರಿಗಳ ದುರಾಡಳಿತದಿಂದ ಹಳ್ಳಿಯ ಜನರು ಪರದಾಡುವಂತಾಗಿದೆ ಎಂದು ಆರೋಪಿಸಿದರು. ಖಾನಾಪೂರ ತಾಲೂಕಿನ ಬಹಳಷ್ಟು ಹಳ್ಳಿಗಳು ಕಾಡಿನಲ್ಲಿವೆ. ಜನರು ತಮ್ಮ ಕೆಲಸ ಮಾಡಿಸಿಕೊಳ್ಳಲು ಕಚೇರಿಗೆ ಬರುತ್ತಾರೆ. ಆದ್ರೇ, ಅಧಿಕಾರಿಗಳು ಮಾತ್ರ ಬೇಜವಾಬ್ದಾರಿಯುತ್ತವಾಗಿ ವರ್ತಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ಪ್ರತಿಯೊಂದು ಕೆಲಸಕ್ಕೂ ಹಣ ಕೇಳುತ್ತಾರೆ ಎಂದು ಆರೋಪಿಸಿದರು. ಅದಕ್ಕಾಗಿ ಕಚೇರಿಯಲ್ಲಿನ ಭ್ರಷ್ಟಾಚಾರಕ್ಕೆ ಹಿರಿಯ ಅಧಿಕಾರಿಗಳು ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.