ವಿಜಯಪುರ: ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲಿ ಅಸಮಾಧಾನ ಸ್ಪೋಟಗೊಂಡಿದೆ. ಕಾರ್ಯಕ್ರಮದ ವೇದಿಕೆ ಮೇಲೆ ಮುಖಂಡರ ಆಹ್ವಾನಕ್ಕೆ ತಾರತಮ್ಯ ಆರೋಪ ಹಿನ್ನೆಲೆ ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ರವಿವಾರ ಆಯೋಜಿಸಿದ್ದ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲ ಮಾತಿನ ಚಕಮಕಿ ನಡೆದಿದೆ. ಅಸಮಾಧಾನ ವ್ಯಕ್ತಪಡಿಸಿ ಕಾರ್ಯಕ್ರಮದಿಂದ ಇಬ್ಬರು ಮುಖಂಡರು ಹೊರ ನಡೆದಿದ್ದಾರೆ.
ವಿಜಯಪುರದ ಜಿಲ್ಲಾಡಳಿತ ವಿರುದ್ಧ ಮುಖಂಡರಿ ಅಸಮಾಧಾನ ಹೊರಹಾಕಿ, ಆಕ್ರೋಶ ವ್ಯಕ್ತಪಡಿಸಿದರು. ಸಂತ ಮಹಾನ್ ವ್ಯಕ್ತಿಗಳ ಜಯಂತಿಗೆ ಕೇವಲ ಆಯಾಯ ಸಮಾಜದ ಓರ್ವ ಪ್ರತಿನಿಧಿಗೆ ವೇದಿಕೆ ಮೇಲೆ ಅವಕಾಶ ಕೊಡ್ತಾರೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾರ್ಯಕ್ರಮ ಉದ್ಘಾಟಿಸುವ ವೇಳೆ ಅಸಮಾಧಾನ ಸ್ಫೋಟಗೊಂಡಿದೆ. ಆದಿ ಜಾಂಬವ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಭೀಮರಾಯ ಜಿಗಜಿಣಗಿ ಹಾಗೂ ಕನ್ನಡ ಸೇನೆ ಜಿಲ್ಲಾಧ್ಯಕ್ಷ ದೇವೆಂದ್ರ ಕಿಡಿಕಾರಿ ಜಿಲ್ಲಾಡಳಿತ ಒಂದು ಕಣ್ಣಿಗೆ ಸುಣ್ಣ ಮತ್ತೊಂದು ಕಣ್ಣಿಗೆ ಬೆಣ್ಣಿ ಹಚ್ಚುವ ಕೆಲಸ ಮಾಡುತ್ತಿದೆ ಎಂದರು.