ವಿಜಯಪುರ: ಕಾಲುವೆಯಲ್ಲಿ ಜಾರಿ ಬಿದ್ದು ಬಾಲಕ ಅಸುನೀಗಿರುವ ಘಟನೆ
ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ಚಿಕ್ಕ ಆಸಂಗಿ ಗ್ರಾಮದ ಹೊರ ಭಾಗದಲ್ಲಿ ಮಂಗಳವಾರ ಸಂಜೆ ನಡೆದಿದೆ. ಕಲ್ಲಯ್ಯ ಹಿರೇಮಠ (13) ಮೃತ ಬಾಲಕ. ನಿನ್ನೆ ಶಾಲೆಯಿಂದ ಮನೆಗೆ ಬಂದಿದ್ದ ಬಾಲಕ ಜಮೀನಿನಲ್ಲಿ ತಂದೆ ಗಂಗಯ್ಯ ಭೇಟಿಗೆ ತೆರಳಿದ್ದನಿ. ಈ ವೇಳೆ ಜಾಲು ಜಾರಿ ತುಂಬಿ ಹರಿಯುತ್ತಿದ್ದ ಕಾಲುವೆಯಲ್ಲಿ ಬಿದ್ದು ಮೃತಪಟ್ಟಿದ್ದಾನೆ. ಬಾಲಕನ ಶವ ಕಾಲುವೆಯಲ್ಲಿ ಪತ್ತೆಯಾಗಿದೆ. ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.