ವಿಜಯಪುರ: ಬೈಕ್ ಹಾಗೂ ಟ್ರ್ಯಾಕ್ಟರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಓರ್ವ ಸ್ಥಳದಲ್ಲಿ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ಪಟ್ಟಣದ ಹೊರವಲಯದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾನೆ. ಆದ್ರೇ, ಮೃತಪಟ್ಟಿರುವನ ಹೆಸರು ಹಾಗೂ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಅಲ್ಲದೇ, ಬೈಕ್, ಟ್ರ್ಯಾಕ್ಟರ್ನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಘಟನೆ ಬಬಲೇಶ್ವರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.