ವಿಜಯಪುರ: ಸಾರಿಗೆ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಬನ್ನಿ ಹಳ್ಳದ ಹತ್ತಿರ ಬುಧವಾರ ನಡೆದಿದೆ. ಇನ್ನೂ ಅಪಘಾತದಲ್ಲಿ ಬಸ್ನಲ್ಲಿದ್ದ 20 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸವನಬಾಗೇವಾಡಿ ಘಟಕಕ್ಕೆ ಸೇರಿದ ಸಾರಿಗೆ ಸಂಸ್ಥೆ ಬಸ್ ಇದ್ದಾಗಿದೆ. ಗಾಯಾಳು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಬಸವನಬಾಗೇವಾಡಿಯಿಂದ ಕೊಲ್ಹಾರಕ್ಕೆ ಬರುತ್ತಿರುವ ವೇಳೆ ಅವಘಡ ಸಂಭವಿಸಿದೆ. ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.