ವಿಜಯಪುರ: ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಜಾರಿಗೊಳಿಸಬೇಕು ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶಿರಶ್ಯಾಡ ಹೇಳಿದರು. ವಿಜಯಪುರ ನಗರದಲ್ಲಿ ಗುರುವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬರುಬ ಮಾರ್ಚ 1 ರಂದು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಕರೆ ನೀಡಲಾಗಿದೆ. ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು. 7 ನೇ ವೇತನ ಆಯೋಗ ಜಾರಿಗೆ, ಓಪಿಎಸ್ ಪಿಂಚಣಿ ಯೋಜನೆ ಸೇರಿದಂತೆ ವಿವಿಧ ಸೌಲಭ್ಯಕ್ಕಾಗಿ ಆಗ್ರಹಿಸಿ ಮಾರ್ಚ 1 ರಂದು ರಾಜ್ಯದ ಸಮಸ್ತ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದರು.