ವಿಜಯಪುರ: ಜಿಲ್ಲೆಯ ಗ್ರಾಮ ಪಂಚಾಯತಿಗಳ ವಿವಿಧ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸಿ ಗ್ರಾಮ ಪಂಚಾಯತಿ ಸದಸ್ಯರ ಜಿಲ್ಲಾ ಒಕ್ಕೂಟದಿಂದ ವಿಜಯಪುರ ನಗರದ ಜಿಲ್ಲಾ ಪಂಚಾಯತ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು. ಜೆ.ಜೆ.ಎಮ್ ಕಾಮಗಾರಿಗಳು ಕಳಪೆ ಮಟ್ಟದಿಂದ ಕೂಡಿವೆ. ಅವುಗಳನ್ನು ಪರಿಶೀಲನೆ ಮಾಡಬೇಕು. 2010ರಲ್ಲಿ ಘೋಷಣೆಯಾದ ಆದರ್ಶ ಗ್ರಾಮಗಳ ಕಾಮಗಾರಿಯು ಅಪೂರ್ಣವಾಗಿದ್ದು ಪೂರ್ಣ ಮಾಡಬೇಕು. ಅಲ್ಲದೇ, ತೋಟಗಾರಿಕಾ ಕಾಮಗಾರಿಗಳ ನಾನಾ ಸಮಸ್ಯೆಗಳ ಪರಿಹಾರ ಸೇರಿದಂತೆ 10 ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.