ವಿಜಯಪುರ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉತ್ತಮ ಹಾಗೂ ಜನಪರವಾದ ಹಲವಾರು ಯೋಜನೆಗಳನ್ನು ಬಜೆಟ್ನಲ್ಲಿ ಘೋಷಣೆ ಮಾಡಿದ್ದು ಸಂತಸ ತಂದಿದೆ ಎಂದು ಜಿಲ್ಲಾ ಬಿಜೆಪಿ ಮಾಧ್ಯಮ ಸಂಚಾಲಕ ವಿಜಯ ಜೋಶಿ ಹೇಳಿದರು. ವಿಜಯಪುರದಲ್ಲಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ತಿಳಿಸಿದ ಅವರು, ಉದ್ಯೋಗ ಸೃಜನೆಗೆ ೧೦ ಕೋಟಿ, ಕುಶಲಕರ್ಮಿಗಳಿಗೆ ನೆರವು ನೀಡುವ ಯೋಜನೆ ಹೀಗೆ ಎಲ್ಲ ವರ್ಗಗಳ ಕಲ್ಯಾಣವನ್ನು ಉದ್ದೇಶವಾಗಿರಿಸಿಕೊಂಡು ಮಂಡನೆ ಮಾಡಲಾಗಿದೆ. ರೈತರು, ನೀರಾವರಿ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಉತ್ತಮ ಬಜೆಟ್ ಮಂಡನೆ ಆಗಿದೆ ಎಂದರು.