ವಿಜಯಪುರ: ಬಟ್ಟೆ ಒಗೆಯಲು ಹೋಗಿದ್ದ ಬಾಲಕಿ ಕೆರೆಯಲ್ಲಿ ಕಾಲು ಜಾರಿ ಬಿದ್ದು ಅಸುನೀಗಿರುವ ಘಟನೆ ವಿಜಯಪುರ ತಾಲೂಕಿನ ಗುಣಕಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಜನ್ನಾಬಾಯಿ ಚಿದಾನಂದ ಬಡಿಗೇರ ( 16 ) ಮೃತ ಬಾಲಕಿ. ಮೃತಪಟ್ಟಿರುವ ಬಾಲಕಿ ಶವವನ್ನು ಅಗ್ನಿಶಾಮಕ ಸಿಬ್ಬಂದಿಗಳು ಹೊರಗಡೆಗೆ ತೆಗೆದಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ವಿಜಯಪುರ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.