ವಿಜಯಪುರ: ಕುಡಿಯುವ ನೀರಿಗಾಗಿ ಆಗ್ರಹಿಸಿ ಜೋರಾಪೇಟ ನಿವಾಸಿಗಳು ದಿಢೀರ್ ಪ್ರತಿಭಟನೆ ನಡೆಸಿರುವ ಘಟನೆ ವಿಜಯಪುರ ನಗರದ ಜೋರಾಪೇಟ ಕಾಲೋನಿಯಲ್ಲಿ ನಡೆದಿದೆ. ಮಹಾನಗರ ಪಾಲಿಕೆ ಅಧಿಕಾರಿಗಳು ಕುಡಿಯುವ ನೀರು ಸರಿಯಾದ ಸಮಯಕ್ಕೆ ವ್ಯವಸ್ಥೆ ಮಾಡುತ್ತಿಲ್ಲ. ತಡರಾತ್ರಿ ನೀರು ಸರಬರಾಜು ಮಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ, ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳ ವಿರುದ್ಧ ನಿವಾಸಿಗಳು ಕಿಡಿಕಾರಿದರು. ಅದಕ್ಕಾಗಿ ಕುಡಿಯುವ ನೀರನ್ನು ಬೆಳಗ್ಗೆ ಸರಬರಾಜು ಮಾಡಬೇಕು ಎಂದು ಒತ್ತಾಯಿಸಿದರು.