ಬೆಂಗಳೂರು: ಬೇಸಿಗೆ ಆರಂಭವಾಗಿದೆ. ಬೇಸಿಗೆಯಲ್ಲಿ ರೈತರ ಬೆಳೆಗಳಿಗೆ ನಿರಂತರ ನೀರು ಪೂರೈಸಬೇಕು. ಅದಕ್ಕಾಗಿ ಬೇಸಿಗೆಯಲ್ಲಿ ಬೆಳೆಗಳಿಗೆ ನೀರುಣಿಸಲು ರೈತರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಂತಸ ಸುದ್ದಿ ನೀಡಿದ್ದಾರೆ. ಬೇಸಿಗೆಯಲ್ಲಿ ಬೆಳೆಗಳಿಗೆ ನೀರು
ಹರಿಸಲು ವಿದ್ಯುತ್ ಸಮಸ್ಯೆ ಆಗದಂತೆ ಕ್ರಮ
ಕೈಗೊಳ್ಳಲಾಗುವುದು. ರೈತರ ನಿಯೋಗದೊಂದಿಗೆ ಚರ್ಚೆ ನಡೆಸಿದ ಸಿಎಂ ಬೊಮ್ಮಾಯಿ, ಬೇಸಿಗೆಯಲ್ಲಿ ಬೆಳೆಗಳಿಗೆ
ನೀರು ಹಾಯಿಸಲು ರೈತರ ಪಂಪ್ ಸೆಟ್ ಗಳಿಗೆ ನಿರಂತರ 7 ಗಂಟೆ ಮೂರು ಫೇಸ್ ವಿದ್ಯುತ್ ಪೂರೈಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಲ್ಲದೇ, ರಾಜ್ಯದಲ್ಲಿ ವಿದ್ಯುತ್ ಕೊರತೆ ಉಂಟಾದಲ್ಲಿ ಹೊರ ರಾಜ್ಯಗಳಿಂದ ವಿದ್ಯುತ್ ಪೂರೈಕೆ ಮಾಡಿಕೊಳ್ಳಲಾಗುವುದು ಎಂದಿದ್ದಾರೆ.