ವಿಜಯಪುರ: ಪಿಯು ಪರೀಕ್ಷಾ ಕೇಂದ್ರದಲ್ಲಿ ಸ್ಪೆಷಲ್ ಅಬ್ಸರ್ವರ್ ಯಡವಟ್ಟು ಮಾಡಿರುವ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕಿನ ದೇವಣಗಾಂವ ಪರೀಕ್ಷಾ ಕೇಂದ್ರದಲ್ಲಿ ಸೋಮವಾರ ನಡೆದಿದೆ. ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಕೊಂಡೊಯ್ದು ನಿರ್ಮಲಾ ಭೂಸಗೊಂಡ ಸೆಲ್ಫಿ ತೆಗೆದುಕೊಂಡಿದ್ದಾರೆ. ಪರೀಕ್ಷಾ ನಿಯಮಗಳನ್ನು ಸಿಂದಗಿ ಸಮಾಜ ಕಲ್ಯಾಣ ಇಲಾಖೆ ಎಡಿ ನಿರ್ಮಲಾ ಭೂಸಗೊಂಡ ಉಲ್ಲಂಘನೆ ಮಾಡಿದ್ದಾರೆ. ಅಲ್ಲದೇ, ದೇವಣಗಾಂವ ಪರೀಕ್ಷಾ ಕೇಂದ್ರದಲ್ಲಿ ಸ್ಪೆಶಲ್ ಅಬ್ಸರ್ವರ್ ಆಗಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದ ವೇಳೆ ಸ್ಮಾರ್ಟ್ ಪೋನ್ನಲ್ಲಿ ಸೆಲ್ಫಿ ಕ್ಲಿಕ್ಕಿಸಿ ಗ್ರುಪ್ಗಳಲ್ಲಿ ಶೇರ್ ಮಾಡಿದ್ದಾರೆ. ಇಂದು ಪಿಯುಸಿ ಪ್ರಥಮ ಭಾಷೆ ಕನ್ನಡ ಪರೀಕ್ಷೆಯಲ್ಲಿ ಯಡವಟ್ಟು ಆಗಿದೆ.