ವಿಜಯಪುರ: ವಿಜಯ ಸಂಕಲ್ಪ ಯಾತ್ರೆಗೆ ರಾಜ್ಯದಲ್ಲಿ ಅಭೂತಪೂರ್ವ ಬೆಂಬಲ ದೊರೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ಹೇಳಿದರು. ವಿಜಯಪುರ ಜಿಲ್ಲೆಯ ಬಸವನಬಾಗೇಬಾಡಿ ಸಮೀಪದ ಆಲಮಟ್ಟಿಯಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಹೋದ ಕಡೆಗಳೆಲ್ಲ ಜನರು ಉತ್ತಮವಾಗಿ ಸ್ಪಂದನೆ ನೀಡುತ್ತಿದ್ದಾರೆ. ಮಂಡ್ಯದಲ್ಲಿ ಮೋದಿ ಕಾರ್ಯಕ್ರಮ ನಿರೀಕ್ಷಿಗೇ ಮೀರಿ ಬೆಂಬಲ ದೊರಕಿದೆ. ಮಂಡ್ಯ ಭಾಗದಿಂದ ಕಾಂಗ್ರೆಸ್, ಜೆಡಿಎಸ್ ನಾಯಕರು ಬಿಜೆಪಿಗೆ ಬರಲಿದ್ದಾರೆ. ಪ್ರಧಾನಿ ಮೋದಿಗೆ ಮಂಡ್ಯದಲ್ಲಿ ಉತ್ತಮವಾದ ಬೆಂಬಲ ನೀಡಿದ್ದಾರೆ. ಕಾಂಗ್ರೆಸ್ ನಾಯಕರ ಸುಳ್ಳು ಭರವಸೆ ಜನರಿಗೆ ತಿಳಿದಿದೆ. ಬಿಜೆಪಿ ಪರವಾಗಿ ರಾಜ್ಯದಲ್ಲಿ ಜನ ಬೆಂಬಲ ಇದೆ ಎಂದರು.
ಕಾಂಗ್ರೆಸ್ ನಲ್ಲಿ ನಾಯಕತ್ವ ಡಿಎನ್ಎ ಮೂಲಕ ಬರುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದರು. ಜೆಡಿಎಸ್ ನಲ್ಲೂ ಕುಟುಂಬದ ಆಧಾರದ ಮೇಲೆ ನಾಯಕತ್ವ ಬರುತ್ತದೆ. ಆದರೆ ಬಿಜೆಪಿಯಲ್ಲಿ ಅದು ಸಾಧ್ಯವಿಲ್ಲ. ನಮ್ಮ ಪಕ್ಷದಲ್ಲಿ ಕಾರ್ಯಕರ್ತರ ಮೂಲಕ ನಮ್ಮಲ್ಲಿ ನಾಯಕರು ಬರುತ್ತಾರೆ. ಸಂವಿಧಾನದ ಅನುಗುಣವಾಗಿ ನಾವು ಮೀಸಲಾತಿ ನೀಡಿದೇವು ಎಂದರು. ಬಿಜೆಪಿ ಸರ್ಕಾರದಲ್ಲಿ ನೀರಾವರಿ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ಮಾಡಲಾಗಿದೆ ಎಂದು ಶಾಸಕ ಎಂಬಿ ಪಾಟೀಲ್ ವಿರುದ್ಧ ವಾಗ್ದಾಳಿ ಮಾಡಿದರು.