ವಿಜಯಪುರ: ವಿಜಯ ಸಂಕಲ್ಪ ಯಾತ್ರೆಯಲ್ಲಿ ಸರಣಿ ಕಾರು ಅಪಘಾತ ಆಗಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ ಆಲಮಟ್ಟಿಯಲ್ಲಿ ಸೋಮವಾರ ನಡೆದಿದೆ. ಬಿಜೆಪಿ ಮುಖಂಡ ಅಪ್ಪುಗೌಡ ಮನಗೂಳಿ, ರಾಜು ನ್ಯಾಮಗೌಡ ಸೇರಿದಂತೆ ಐವರ ಕಾರು ಅಪಘಾತ ಆಗಿದೆ. ಐದು ಕಾರುಗಳು ಸಂಪೂರ್ಣವಾಗಿ ಜಖಂಗೊಂಡಿವೆ. ಆದ್ರೇ, ಯಾವುದೇ ಪ್ರಾಣ ಹಾನಿಯಾಗಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಲಮಟ್ಟಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.