ವಿಜಯಪುರ: ಕೇಂದ್ರ ಸಚಿವೆ ಪ್ರಯಾಣಿಸುತ್ತಿದ್ದ ಕಾರು ಹಾಗೂ ಕ್ಯಾಂಟರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ವಿಜಯಪುರದ ಜುಮನಾಳ ಕ್ರಾಸ್ ಬಳಿ ಗುರುವಾರ ನಡೆದಿದೆ.
ಕೇಂದ್ರ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಪ್ರಯಾಣ ಮಾಡುತ್ತಿದ್ದ ಕಾರು ಅಪಘಾತದಲ್ಲಿ ಕೇಂದ್ರ ಸಚಿವರಿಗೆ ಹಾಗೂ ಕಾರ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇನ್ನು ಗಾಯಗೊಂಡ ಕೇಂದ್ರ ಸಚಿವೆ ಸಾದ್ವಿ ನಿರಂಜನಾ ಜ್ಯೋತಿ ಹಾಗೂ ಕಾರ್ ಚಾಲಕ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಯಾರಿಗೂ ಗಂಭೀರ ಗಾಯವಾಗಿಲ್ಲ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.