ವಿಜಯಪುರ: ಜಿಲ್ಲಾ ಸರ್ಕಾರಿ ಆಸ್ಪತ್ರೆ ಖಾಸಗೀಕರಣ ವಿರೋಧಿಸಿ ಎಸ್ಯುಸಿಐ ನೇತೃತ್ವದಲ್ಲಿ ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. ಸರ್ಕಾರಗಳು ಜಿಲ್ಲಾಸ್ಪತ್ರೆಗಳನ್ನು ಖಾಸಗೀಕರಣ ಮಾಡಬಾರದು. ಇದರಿಂದ ಬಡವರಿಗೆ ಸಾಕಷ್ಟು ಸಮಸ್ಯೆ ಆಗುತ್ತದೆ ಎಂದು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ, ಪಡಿತರದಲ್ಲಿ ದವಸ ಧ್ಯಾನಗಖ ಕಡಿತಗೊಳಿಸಬಾರದು. ವಿದ್ಯುತ್ ಖಾಸಗೀಕರಣ ಸೇರಿದಂತೆ ವಿವಿಧ ಖಾಸಗೀಕರಣ ಕೆಲಸಗಳಿಗೆ ಸರ್ಕಾರ ಕೈ ಹಾಕಬಾರದು ಎಂದು ಎಚ್ಚರಿಕೆ ನೀಡಿದರು. ಅದಕ್ಕಾಗಿ ತಕ್ಷಣವೇ ಖಾಸಗೀಕರಣಕ್ಕೆ ಕಡಿವಾಣ ಹಾಕಬೇಕು ಎಂದು ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.