ವಿಜಯಪುರ: ಖಾಸಗಿ ವಾಹನ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಓರ್ವ ಸವಾರ ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವಿಜಯಪುರ ನಗರದ ಸೊಲ್ಲಾಪುರ ರಸ್ತೆಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಚಂದಾಬಾವಡಿ ನಿವಾಸಿ ಉಮರ್ ಬುಡನಸಾಬ್ ಲಾಟಿ ಮೃತಪಟ್ಟಿರುವ ದುರ್ದೈವಿ. ಇನ್ನು ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಅಲ್ಲದೇ,ಖಾಸಗಿ ವಾಹನ ಚಾಲಕ ಎಸ್ಕೇಪ್ ಆಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.