ವಿಜಯಪುರ: ಅನುಮಾನಸ್ಪದ ರೀತಿಯಲ್ಲಿ ಹೋಟೆಲ್ ರೂಮ್ನಲ್ಲಿ ಎರಡು ಶವ ಪತ್ತೆಯಾಗಿರುವ ಘಟನೆ ವಿಜಯಪುರ ನಗರದ ರಾಜಧಾನಿ ಹೋಟೆಲ್ನಲ್ಲಿ ಶುಕ್ರವಾರ ನಡೆದಿದೆ. ಬಳ್ಳಾರಿಯ ಶ್ರೀಕಾಂತಪುರ ತಾಂಡಾ ನಿವಾಸಿ ಸಿ.ಇಂದ್ರಕುಮಾರ ಹಾಗೂ ಮತ್ತೋರ್ವನ ಶವ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ. ಆದ್ರೇ, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಪೊಲೀಸ ತನಿಖೆ ಬಳಿಕ ತಿಳಿದು ಬರಬೇಕಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.