ವಿಜಯಪುರ: ವಿಧಾನಸಭಾ ಚುನಾವಣೆಯಲ್ಲಿ ಹಿನ್ನೆಲೆ ಅಕ್ರಮವಾಗಿ ಮಾವಾ ತಯಾರಿಸಿ ಸಾಗಾಟಕ್ಕೆ ಯತ್ನಿಸುವಾಗ ಪೊಲೀಸರು ದಾಳಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ತಿಕೋಟಾ ಪಟ್ಟಣದಲ್ಲಿ ಶುಕ್ರವಾರ ನಡೆದಿದೆ. ಸುಮಾರು 30 ಸಾವಿರ ಮೌಲ್ಯದ ಮಾವಾವನ್ನು ಪೊಲೀಸರು ಜಪ್ತಿಗೈದಿದ್ದಾರೆ. ಅಲ್ಲದೇ, ಓರ್ವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಾವಾವನ್ನು ಪಾಕೀಟ್ನಲ್ಲಿ ಸಂಗ್ರಹಿಸಿ ಮಾರಾಟಕ್ಕೆ ಯತ್ನಿಸಿದ್ದಾರೆ. ಸಿಇಎನ್ ಸಿಪಿಐ ಸಂಜೀವ ಕಾಂಬ್ಳೆ ನೇತೃತ್ವದಲ್ಲಿ ಪೊಲೀಸರು ದಾಳಿ ಮಾಡಿದ್ದಾರೆ. ಈ ಕುರಿತು ತಿಕೋಟಾ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.