ತುಮಕೂರು: ಅರಣ್ಯ ಇಲಾಖೆ ಸಿಬ್ಬಂದಿಗಳ ದಿವ್ಯ ನಿರ್ಲಕ್ಷ್ಯದ ಪರಿಣಾಮ ಶುಕ್ರವಾರ ರಾತ್ರಿ ನಡೆದ ಚಿರತೆ ದಾಳಿಗೆ ಹಸು ಮತ್ತು ಕರು ಸಾವನ್ನಪ್ಪಿದ ಘಟನೆ ನಡೆದಿದೆ. ತುಮಕೂರು ಹೊರವಲಯದ ಕಸಬ ಪೂರ್ವ ವಲಯದ ಕುಂದೂರು ಗ್ರಾಮದಲ್ಲಿ ಚಿರತೆ ದಾಳಿಗೆ ಹಸು-ಕರು ಬಲಿಯಾದ ಘಟನೆ ರಾತ್ರಿ ನಡೆದಿದೆ.
ಅರಣ್ಯ ಇಲಾಖೆ ಸಿಬ್ಬಂಧಿಗಳ ದಿವ್ಯ ನಿರ್ಲಕ್ಷ್ಯದ ಪರಿಣಾಮ ಈ ಸಾಕು ಪ್ರಾಣಿಗಳ ಬಲಿಗೆ ನೇರ ಹೊಣೆ ಎಂದು ಕುಂದೂರು ಗ್ರಾಮದ ಸಾರ್ವಜನಿಕರು ಗಂಭೀರ ಆರೋಪ ಮಾಡಿದ್ದಾರೆ. ಈ ವೇಳೆ ರೈತ ಮಹಿಳೆ ಮಾತನಾಡಿ, ಕಳೆದ ನಾಲ್ಕೈದು ತಿಂಗಳಿಂದಲೂ ಚಿರತೆ ಹಾವಳಿ ಹೆಚ್ಚಾಗಿದೆ. ಹಲವು ಬಾರಿ ಅರಣ್ಯ ಇಲಾಖೆ ಸಿಬ್ಬಂದಿಗೆ ಹೇಳಿದ್ರೂ ತಲೆ ಕೆಡಿಸಿಕೊಂಡಿಲ್ಲ. ಅರಣ್ಯ ಇಲಾಖೆ ಸಿಬ್ಬಂದಿಗಳ ದಿವ್ಯ ನಿರ್ಲಕ್ಷ್ಯದ ಪರಿಣಾಮ ಇಂತಹ ಘಟನೆಗಳು ಮರುಕಳುಹಿಸುತ್ತವೆ ಅಂತಾ ಆಕ್ರೋಶ ವ್ಯಕ್ತಪಡಿಸಿದರು.