ವಿಜಯಪುರ: ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಸ್ಥಾಪಿಸಿದ್ದ ನೂತನ ಬಾಯ್ಲರ್ ಸ್ಫೋಟಗೊಂಡಿರುವ ಘಟನೆ
ವಿಜಯಪುರ ಜಿಲ್ಲೆ ಬಬಲೇಶ್ವರ ಪಟ್ಟಣದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಶನಿವಾರ ನಡೆದಿದೆ. ಇತ್ತೀಚೆಗೆ ಕಾರ್ಖಾನೆಯಲ್ಲಿ ನೂತನವಾಗಿ ಬಾಯ್ಲರ್ ಸ್ಥಾಪನೆ ಮಾಡಲಾಗಿತ್ತು. ನೂತನ ಬಾಯ್ಲರ್ ನ್ನು ಪ್ರಾಯೋಗಿಕವಾಗಿ ಪರೀಕ್ಷೆ ಮಾಡುವ ವೇಳೆ ಅವಘಡ ಸಂಭವಿಸಿದೆ. ಘಟನೆಯಲ್ಲಿ ನಾಲ್ಕು ಜನ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿವೆ. ಅಲ್ಲದೇ, ಪೂನಾದ ಎಸ್ ಎಸ್ ಇಂಜೀನಿಯರ್ಸ್ ನಿಂದ ಅಳವಡಿಸಿದ್ದ ನೂತನ ಬಾಯ್ಲರ್ ಇದಾಗಿದೆ. 220 ಟನ್ ಕೆಪಾಸಿಟಿ ಹೊಂದಿದ್ದ ಬಾಯ್ಲರ್ಗೆ 51 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿತ್ತು. ದೆಹಲಿಯ ಐ ಎಸ್ ಜಿ ಸಿ ಕಂಪನಿಯ ಬಾಯ್ಲರ್ ಬದಲಾಗಿ ಪೂನಾದ ಎಸ್ ಎಸ್ ಇಂಜೀನಿಯರ್ಸ್ ಅಳವಡಿಸಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.