ವಿಜಯಪುರ: ಚಿಕಿತ್ಸೆ ಫಲಕಾರಿಯಾಗದೇ ಓರ್ವ ಕಾರ್ಮಿಕ ಅಸುನೀಗಿರುವ ಘಟನೆ ವಿಜಯಪುರ ನಗರದ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ನಡೆದಿದೆ. ಪಶ್ಚಿಮ ಬಂಗಾಲ ಮೂಲದ ಸಂದೀಪ ಮಂಡಳ (21) ಮೃತ ಕಾರ್ಮಿಕ. ನಿನ್ನೆ ಬಬಲೇಶ್ವರ ಪಟ್ಟಣದ ಕೃಷ್ಣಾ ನಗರದಲ್ಲಿರುವ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಸ್ಥಾಪಿಸಿದ್ದ ನೂತನ ಬಾಯ್ಲರ ಸ್ಫೋಟಗೊಂಡಿತ್ತು. ಇದರಲ್ಲಿ ಐವರು ಕಾರ್ಮಿಕರಿಗೆ ಗಂಭೀರ ಗಾಯಗೊಂಡಿದ್ದರು. ಐವರು ಗಾಯಾಳುಗಳ ಪೈಕಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ.
ಅಲ್ಲದೇ, ಪರಸನಜೀತ ಮಂಡಳ, ರಾಜಕುಮಾರ ರಾಮ್ ಸ್ಥಿತಿ ಗಂಭೀರವಾಗಿದೆ. ಇಮ್ರಾನ್ ಅನ್ಸಾರಿ, ಅಶೊಕಕುಮಾರ ರಾಮ ಇವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬಬಲೇಶ್ವರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.