ವಿಜಯಪುರ: ರಾಜಾಹುಲಿ ಖ್ಯಾತಿಯ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರನ್ನು ಸಿಎಂ ಮಾಡಿದ್ದು ನಾನು ಎಂದು ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಹೇಳಿದರು. ವಿಜಯಪುರ ತಾಲ್ಲೂಕಿನ ನಾಗಠಾಣ ಗ್ರಾಮದಲ್ಲಿ ರವಿವಾರ ನಡೆದ ಜನಾಶೀರ್ವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷ ಬಲವರ್ಧನೆಗೆ ಶ್ರಮಿಸಿದ್ದೇನೆ. ಬಳ್ಳಾರಿಯಲ್ಲಿ ಗ್ರಾಮ ಪಂಚಾಯಿತಿಯಿಂದ ಜಿಲ್ಲಾ ಪಂಚಾಯತ್ ಹಿಡಿದು 9 ರಿಂದ 10ಎಂಎಲ್ ಎ ಗೆಲ್ಲಿಸಿದೆ. ಇಡೀ ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸಿದೆ ಎಂದರು. ದಕ್ಷಿಣ ಭಾರತದ ಮೊದಲ ಬಾರಿಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂತು.
ಯಡಿಯೂರಪ್ಪನವರನ್ನು ಮುಖ್ಯಮಂತ್ರಿಯನ್ನಾಗಿ ನಿಮ್ಮೆಲ್ಲರ ಆಶೀರ್ವಾದದಿಂದ ಮಾಡಿದ್ದು ಜನಾರ್ಧನ ರೆಡ್ಡಿ ಎಂದು ಹೆಮ್ಮೆಯಿಂದ ಹೇಳಿಕೊಳ್ತೀನಿ ಎಂದರು.