ವಿಜಯಪುರ: ನಗರದಲ್ಲಿ ವಾಹನಗಳ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಂದ್ರಪ್ರದೇಶದ ಚಕ್ರಧಾರ ಸಂಗೇಪು ಬಂಧಿತ ಆರೋಪಿ. ಇನ್ನು ಬಂಧಿತ ಆರೋಪಿಯಿಂದ 17 ಲಕ್ಷದ 15 ಸಾವಿರ ಮೌಲ್ಯದ ಕಾರು, ಮೊಬೈಲ್‌ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೇ, ಸಂಜೀವ ನೆಮೂಲಾ, ಸುಬ್ಬರಾವ ಟಿ ಪರಾರಿಯಾಗಿದ್ದಾರೆ. ಪರಾರಿಯಾಗಿರುವ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಈ ಕುರಿತು ಗೋಲಗುಮ್ಮಜ್ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.