ವಿಜಯಪುರ: ಮನಗೂಳಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಬ್ಯಾಂಕ್ನಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಎಸ್ಬಿಐ ಬ್ಯಾಂಕ್ನಲ್ಲಿ ನಡೆದಿದೆ. ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ಸಿಬ್ಬಂದಿಗಳಿಗೆ ಪಿಸ್ತೂಲ್ ತೋರಿಸಿ ಕಟ್ಟಿಹಾಕಿ ಕಳ್ಳರು ಕಳ್ಳತನ ಮಾಡಿದ್ದಾರೆ. ಇನ್ನು ಬ್ಯಾಂಕ್ ವಹಿವಾಟು ಸಮಯ ಮುಗಿದ ಮೇಲೆ ಬ್ಯಾಂಕ್ಗೆ 3ಕ್ಕೂ ಹೆಚ್ಚು ಮುಸುಕುಧಾರಿಗಳು ನುಗ್ಗಿ ಕೃತ್ಯ ಎಸಗಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬ್ಯಾಂಕ್ನಲ್ಲಿ ಎಷ್ಟು ಹಣ ಕಳ್ಳತನದ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಚಡಚಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.