ಧಾರವಾಡ: ಬಿಜೆಪಿ ಧಾರವಾಡ ಜಿಲ್ಲಾ ಯವಮೋರ್ಚಾ ಉಪಾಧ್ಯಕ್ಷನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ. ಪ್ರವೀಣ ಕಮ್ಮಾರ ಎಂಬುವವರೇ ಹತ್ಯೆಗೀಡಾದವರು. ನಿನ್ನೆ ರಾತ್ರಿ ವೈಯಕ್ತಿಕ ಕಾರಣಕ್ಕಾಗಿ ಯುವಕರ ಮಧ್ಯೆ ಜಗಳ ಸಂಭವಿಸಿದ್ದು, ಈ ಜಗಳ ಪ್ರವೀಣ ಅವರ ಕೊಲೆಯಲ್ಲಿ ಅಂತ್ಯವಾಗಿದೆ. ಜಗಳದಲ್ಲಿ ದುಷ್ಕರ್ಮಿಗಳು ಪ್ರವೀಣ ಅವರ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಚಿಕಿತ್ಸೆಗಾಗಿ ಪ್ರವೀಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದ ಪ್ರವೀಣ ಅಸುನೀಗಿದ್ದಾರೆ. ದೂರು ದಾಖಲಿಸಿಕೊಂಡಿರುವ ಗರಗ ಠಾಣೆ ಪೊಲೀಸರು ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ.