ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರ್ ಮರಕ್ಕೆ ಡಿಕ್ಕಿಯಾಗಿರುವ ಪರಿಣಾಮ ಅಪ್ಪಂದಿರ ದಿನವೇ ಅಪ್ಪ-ಮಗ ದಾರುಣ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುತ್ತಿಗೆಪುರ ಗ್ರಾಮದಲ್ಲಿ ನಡೆದಿದೆ.
ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದು ಬೆಂಗಳೂರಿಗೆ ಹಿಂದಿರುಗುತ್ತಿದ್ದ ವೇಳೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ನರಸಿಂಹರಾಜ್ (46) ಹಾಗೂ ಕಿರಣ್ (23) ಮೃತ ಅಪ್ಪ-ಮಗ ಅಸುನೀಗಿದ್ದಾರೆ. ಮೃತರು ಬೆಂಗಳೂರಿನ ರಾಜಾಜಿನಗರ ಮೂಲದವರು ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಮತ್ತಿಬ್ಬರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಆಂಬುಲೆನ್ಸ್ ಸಿಗದ ಹಿನ್ನಲೆ ಗೂಡ್ಸ್ ಆಟೋದಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.