ವಿಜಯಪುರ: ಆಕಸ್ಮಿಕ ಶಾರ್ಟ್ ಸರ್ಕ್ಯೂಟ್ನಿಂದ ಬೇಕರಿ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಬುಧವಾರ ನಡೆದಿದೆ. ಸರ್ಫ್ರಾಜ್ ಕೊಕಣಿ ಎಂಬುವರ ಅಂಗಡಿಯಲ್ಲಿ ಬೆಂಕಿ ಅವಘಡ ಆಗಿದೆ. ಅಲ್ಲದೇ, ಲಕ್ಷಾಂತರ ಮೌಲ್ಯದ ವಸ್ತುಗಳು ಹಾನಿಯಾಗಿದೆ. ಇನ್ನೂ ವಿವಿಧ ಬೇಕರಿ ಐಟಂಗಳು ಸುಟ್ಟು ಭಸ್ಮವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಂಡಿ ಶಹರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ..