ವಿಜಯಪುರ: ಸರ್ಕಾರಿ ಕೆಲಸಕ್ಕೆ ಗುಡ್ ಬೈ.. ಚುನಾವಣೆ ಅಖಾಡಕ್ಕೆ ಜೈ ಎಂದು ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ. ವಿಜಯಪುರ ನಗರದ ಬಿಎಸ್ಎನ್ಎಲ್ ಕಚೇರಿಯಲ್ಲಿ ಕೆಲಸ ನಿರ್ವಹಣೆ ಮಾಡುತ್ತಿರುವ ಸುರೇಶ ಬಿರಾದಾರ ರಾಜೀನಾಮೆ ನೀಡಿದ್ದಾರೆ. ಅಲ್ಲದೇ, ವಿಜಯಪುರ ನಗರ ಮತಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಅಖಾಡಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಈಗಾಗಲೇ ಬಿಎಸ್ಎನ್ಎಲ್ ಕಚೇರಿಯ ಮ್ಯಾನೇಜರ್ಗೆ ರಾಜೀನಾಮೆ ಪತ್ರ ನೀಡಿದ್ದಾರೆ. ಬರುವ 2023ರ ಚುನಾವಣೆಗೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ.